Select Your Language

Notifications

webdunia
webdunia
webdunia
webdunia

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ: ಹೆಚ್ಚಿದ ಆತಂಕ

Monkey Disease in Karnataka

Sampriya

ಚಿಕ್ಕಮಗಳೂರು , ಮಂಗಳವಾರ, 26 ಮಾರ್ಚ್ 2024 (17:23 IST)
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ.

ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿದೆ.

 ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚಾಗುತ್ತಿದೆ. ಕೊಪ್ಪ , ಎನ್. ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಕೆಎಫ್ ಡಿ ಸೋಂಕು ಹೆಚ್ಚುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ 11 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ತಂದೆ- ಮಗ ಸೇರಿ ನಾಲ್ವರು ದುರ್ಮರಣ