Select Your Language

Notifications

webdunia
webdunia
webdunia
webdunia

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

Monsoon alert, Meteorological Department, red alert announcement

Sampriya

ಬೆಂಗಳೂರು , ಭಾನುವಾರ, 15 ಜೂನ್ 2025 (10:34 IST)
Photo Courtesy X
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಎಲ್ಲೆಡೆ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. 

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 

ಶನಿವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.   

ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ಮಂಗಳೂರು ನಗರ ಪ್ರದೇಶದಲ್ಲಿ ವಿಶೇಷವಾಗಿ ಮಳೆ ಅವಾಂತರ ಸೃಷ್ಟಿಯಾಗಿದೆ. ಕುಮಟಾದಲ್ಲಿ ಗರಿಷ್ಠ ಮಳೆ ದಾಖಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.






Share this Story:

Follow Webdunia kannada

ಮುಂದಿನ ಸುದ್ದಿ

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು