Publish Date: Sun, 12 Jul 2026 (17:08 IST)
Updated Date: Sun, 12 Jul 2026 (17:10 IST)
ಬೆಂಗಳೂರು: ರಾಜ್ಯದಲ್ಲಿ 2026ರ ಮುಂಗಾರು ವೈಪರೀತ್ಯದಿಂದಾಗಿ ಒಂದೆಡೆ ಭಾರೀ ಪ್ರವಾಹವಾಗಿ ಹಾನಿಯಾಗಿದ್ದರೆ, ಮತ್ತೊಂದು ಕಡೆ ಶೇ.40ರಿಂದ 43ರಷ್ಟು ಮಳೆ ಕೊರತೆಯಿಂದ ಬರಗಾಲ ಉಂಟಾಗಿದೆ. ಈ ಹಿನ್ನೆಲೆ ನಾಳೆಯಿಂದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂಬಂದ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ನೆಲವನ್ನೇ ನಂಬಿರುವ ಅನ್ನದಾತ ಕಣ್ಣೀರು ಸುರಿಸುತ್ತಿರುವುದು ನಮ್ಮ ಹೃದಯವನ್ನು ಕಲಕಿದೆ. ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜನತಾದಳ (ಜಾತ್ಯತೀತ) ಪಕ್ಷದಿಂದ ವಿಶೇಷ ಅಧ್ಯಯನ ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಜುಲೈ 13ರಿಂದ 15ರವರೆಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಜುಲೈ 14ರಂದು ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿಯೇ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಜುಲೈ 15ರಂದು ಬಾಗಲಕೋಟೆ ಬಾದಾಮಿಯಲ್ಲಿ ರೈತರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ