ರಾಜ್ಯದಲ್ಲಿ ಭಾರೀ ಮಳೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ

Webdunia
ಬುಧವಾರ, 14 ಸೆಪ್ಟಂಬರ್ 2022 (14:31 IST)
48ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇಹಿತ ಮಳೆಯಾಗಲಿದೆ. ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.  ಕರಾವಳಿಯ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುಗಿರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ಎಚ್ಚರಿಕೆ ಸಹ ನೀಡಲಾಗಿದೆ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಪ್ರತಿ ಘಂಟೆಗೆ 45 - 55 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.  ನಗರ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಪರದಾಡಯವಂತಾಗಿ ವಾಹನ ಸವಾರರು ಟ್ರಾಫಿಕ್​ ಸಮಸ್ಯೆಗೆ ಸಿಲುಕಿ ಒದ್ದಾಡ್ತಿದ್ದಾರೆ, ನಿತ್ಯ ಸುರಿಯೋ ಮಳೆಗೆ ಜನಜೀವನವೇ ಅಸ್ತವ್ಯಸ್ತಗೊಂಡಿದೆ.ರಾಜಧಾನಿ ಕಂಡು ಕೇಳರಿಯದ ಮಳೆಗೆ ತತ್ತರಿಸಿ ಹೋಗಿದೆ. ಬೆಂಗಳೂರಿನ ಹಲವೆಡೆ ಮಳೆರಾಯ ಭಾರೀ ಅವಾಂತರ ಸೃಷ್ಟಿಸಿದ್ದು, ಜನರು ಮಳೆಯಿಂದ ಕಂಗಾಲಾಗಿದ್ದಾರೆ. ಇದೀಗ ಹವಾಮಾನ ಇಲಾಖೆ ಮತ್ತಷ್ಟು ಮಳೆಯ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments