Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಮುಂಗಾರು ಪ್ರವೇಶ- 5 ದಿನ ಭಾರೀ ಮಳೆ ಮುನ್ಸೂಚನೆ

Monsoon enters the state
bangalore , ಭಾನುವಾರ, 11 ಜೂನ್ 2023 (19:37 IST)
ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 2 ದಿನ ಭಾರೀ ಮಳೆಯಾಗಲಿದೆ. ಜೂ. 13 ರಿಂದ 15 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳು ಹೆಚ್ಚಾಗಬಹುದು. ಹೀಗಾಗಿ ಮುಂದಿನ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಗರಹೊಳೆಯಲ್ಲಿ ಬಿಳಿ ಜಿಂಕೆ ಪತ್ತೆ