Daily Horoscope
✕

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಸಂಪ್ರಿಯ
ಸೋಮವಾರ, 14 ಸೆಪ್ಟಂಬರ್ 2026 (14:58 IST)
Photo Courtesy X
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕ್ಷೀಣಿಸಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆ ವಾತಾವರಣ ಮುಂದುವರಿಯಲಿದೆ ಹಾಗೂ ಗರಿಷ್ಠ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಶುಷ್ಕ ವಾತಾವರಣ ಆವರಿಸಿದೆ. ಮಳೆ ಮೋಡಗಳ ಕೊರತೆಯಿಂದಾಗಿ ನೇರ ಸೂರ್ಯನ ಬೆಳಕು ಬೀಳುತ್ತಿದ್ದು, ಕರಾವಳಿ, ಹಳೆ ಮೈಸೂರು ಭಾಗ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 3°C ನಷ್ಟು ತಾಪಮಾನ ಏರಿಕೆಯಾಗಿದೆ.

ಪ್ರಸಕ್ತ ಸೆಪ್ಟೆಂಬರ್ ತಿಂಗಳಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಇರುವುದು ಕೃಷಿ ಚಟುವಟಿಕೆಗಳ ಮೇಲೆಯೂ ಪ್ರಭಾವ ಬೀರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಕೆಲವೇ ಪ್ರದೇಶಗಳಲ್ಲಿ ಮಾತ್ರ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಹಗುರ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಈ ತಿಂಗಳು ಒಣ ಹವೆಯಿಂದ ತಾಪಮಾನದಲ್ಲಿಯೂ ಏರಿಕೆಯಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ವರೆಗೂ ಏರಿಕೆಯಾಗಿದೆ. ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಬೆಂಗಳೂರಿನಲ್ಲಿಯೂ ತಾಪಮಾನ ಏರಿಕೆಯಾಗಿದ್ದು, 33 ಡಿಗ್ರಿ ಸೆಲ್ಸಿಯಸ್‌ಗೆ ಗರಿಷ್ಠ ಉಷ್ಣಾಂಶ ತಲುಪಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಒಂದು ವಾರ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೊಡಗು, ರಾಮನಗರ ಜಿಲ್ಲೆಯ ಒಂದೆರಡು ಕಡೆ ಸೋಮವಾರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನ್ ಪ್ರವಾಸದ ನಡುವೆಯೇ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ

ಏನು ಮಾಡ್ತೀರೋ ಮಾಡ್ಕೊಳ್ಳಿ.. ಫುಟ್ ಪಾತ್ ಮೇಲೆ ಬೈಕ್ ಚಲಾಯಿಸಿದ ಬೈಕ್ ಸವಾರರಿಗೆ ತಕ್ಕ ಪಾಠ ಕಲಿಸಿದ ಮಹಿಳೆಯರು Video

ರಾಜೀವ್ ಗಾಂಧಿ ಭದ್ರತೆ ಹಿಂಪಡೆಯಲಾಗಿತ್ತು, ಮುಂದಿನ ಬಾರಿ ತಂದೆಯ ಅಂತ್ಯಕ್ರಿಯೆಗೆ ಬರಬೇಕಾಗಬಹುದು ಎನಿಸಿತ್ತು: ರಾಹುಲ್ ಗಾಂಧಿ

ದಿಬ್ರುಗಢದಲ್ಲಿ ಚಿರತೆ ದಾಳಿ: ಲೈವ್ ವಿಡಿಯೋದಲ್ಲಿ ಸೆರೆಯಾದ ಘಟನೆ, ಎದ್ನೋ ಬಿದ್ನೋ ಎಂದು ಓಡಿದ ಜನ Video

ಇಂದಿನ ಚಿನ್ನ, ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಯ್ತಾ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments