ರಾಜ್ಯಕ್ಕೆ ಮೇ 31ರಂದು ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

Sampriya
ಭಾನುವಾರ, 26 ಮೇ 2024 (13:05 IST)
photo Courtesy X
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ವರ್ಷಧಾರೆ ಅಬ್ಬರಿಸುತ್ತಿದೆ. ಇದೇ ಮೇ 31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ  ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವುದರಿಂದ ಸಹಜವಾಗಿಯೇ ರೈತರಲ್ಲಿ ಸಂತಸ ಮನೆ ಮಾಡಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ರಾಜ್ಯದಲ್ಲಿ ಮುಂಗಾರು ಆಗಮನವು ಕೊಂಚ ಮುಂದಕ್ಕೆ ಹೋಗಲಿದೆ. ನೈರುತ್ಯ ಮುಂಗಾರು ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ.

ಮೇ 31ರವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾರವಾರದ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments