Webdunia - Bharat's app for daily news and videos

Install App

ರಾಜಕಾರಣಿಗಳಿಗಿಂತ ಐಎಎಸ್, ಐಪಿಎಸ್ ಅಧಿಕಾರಿಗಳ ಬಳಿಯೇ ಹೆಚ್ಚು ಕಪ್ಪು ಹಣ: ಎಚ್‌ಡಿಕೆ

Webdunia
ಗುರುವಾರ, 22 ಡಿಸೆಂಬರ್ 2016 (11:56 IST)
ಕಪ್ಪು ಹಣ ರಾಜಕಾರಣಿಗಳ ಬಳಿ ಕೇವಲ ಶೇ.2 ರಷ್ಟಿರಬಹುದು. ಆದರೆ, ಅತೀ ಹೆಚ್ಚು ಕಪ್ಪು ಹಣ ಇರುವುದು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಬಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಮನೆ ಹಾಗೂ ಅವರ ಮೂಲ ಸ್ಥಳಗಳ ಮೇಲೆ ದಾಳಿ ನಡೆಸಿದರೆ ಕಪ್ಪು ಹಣದ ಸಂಪೂರ್ಣ ಮಾಹಿತಿ ತಿಳಿಯುತ್ತದೆ ಎಂದು ದೂರಿದ್ದಾರೆ. 
 
ಕರ್ನಾಟಕ ಸಂಪತ್ಭರಿತವಾದ ರಾಜ್ಯ. ಆದರೆ, ಇದನ್ನು ಸದುಪಯೋಗ ಮಾಡುವುದನ್ನು ಬಿಟ್ಟು, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಕೊಳ್ಳೆ ಹೊಡೆಯುತ್ತಿದ್ದಾರೆ. ಅಧಿಕಾರಿಗಳು ತಮ್ಮ ಮೂಲ ಸ್ಥಾನಗಳಲ್ಲಿ ಸಾವಿರ ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆಂದು ಮಾಹಿತಿ ಇದೆ. ಅದಕ್ಕಾಗಿ ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಉತ್ತರ ಭಾರತ ಮೂಲದ ಅಧಿಕಾರಿಗಳಿಗೆ ಪ್ರಾಮುಖ್ಯ ನೀಡದೆ ನಮ್ಮ ರಾಜ್ಯದ ಅಧಿಕಾರಿಗಳಿಗೆ ಆಧ್ಯತೆ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments