Publish Date: Fri, 17 Mar 2017 (11:45 IST)
Updated Date: Fri, 17 Mar 2017 (11:46 IST)
ಕಾಂಗ್ರೆಸ್ ಪಕ್ಷ ಸೇರಿದಂತೆ ಇತರ ಪಕ್ಷಗಳ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ, ಸದ್ಯಕ್ಕೆ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಬೇಸತ್ತ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಮುಖ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ ಮೋದಿ ಪರ ಅಲೆಯಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಖಚಿತ ಎಂದು ಗುಡುಗಿದ್ದಾರೆ.
ಚುನಾವಣೆಗೆ ಇನ್ನೂ ಒಂದು ವರ್ಷದ ಕಾಲವಧಿಯಿರುವುದರಿಂದ ಸದ್ಯಕ್ಕೆ ಬಿಜೆಪಿ ಸೇರ್ಪಡೆಯಾಗಲು ಬಯಸಿರುವ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದು ಬೇಡ ಎಂದು ನಿರ್ಧರಿಸಲಾಗಿದೆ. ಮುಂಬರುವ ದಿನಗಳಲ್ಲಿ ಭಾರಿ ಬದಲಾವಣೆಯಾಗಲಿದೆ ಕಾದು ನೋಡಿ ಎಂದರು.
ಸಿಎಂ ಸಿದ್ದರಾಮಯ್ಯ ಸರಕಾರದ ದುರಾಡಳಿತದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದಾರೆ. ರಾಜ್ಯ ಭೀಕರ ಬರಗಾಲದಿಂದ ತತ್ತರಿಸಿದ್ದರೂ ರೈತರಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಸರಕಾರ ಮೀನಮೇಷ ಎಣಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.