Select Your Language

Notifications

webdunia
webdunia
webdunia
Wednesday, 2 April 2025
webdunia

100ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌
bangalore , ಗುರುವಾರ, 28 ಸೆಪ್ಟಂಬರ್ 2023 (13:48 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ, ಅತ್ತಿಬೆಲೆಯಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಕನ್ನಡ ಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅತ್ತಿಬೆಲೆ ಟೋಲ್​ನಿಂದ ಗಡಿವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಪ್ರತಿಭಟನೆ ಹಿನ್ನೆಲೆ ಗಡಿ ಗೋಪುರದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಭಾಗಿಯಾಗಿದ್ರು.

ಶುಕ್ರವಾರ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ ನೇತೃತ್ವದಲ್ಲಿ ಕರುನಾಡು ಬಂದ್ ಆಗಲಿದೆ. 100ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ನೀಡುತ್ತಿದ್ದು, ಸೆ.29ರಂದು ಬಂದ್‌ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಅಡಿಕೊಳ್ಳಲಾಗಿದೆ. ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ಹಿನ್ನೆಲೆ ಕರ್ನಾಟಕ ಬಂದ್‌ ಮತ್ತೆ ತೀವ್ರ ಸ್ವರೂಪ ಪಡೆಯೋ ಸಾಧ್ಯತೆಯಿದೆ, ಆಟೋ, ಟ್ಯಾಕ್ಸಿ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ನೀಡುತ್ತಿವೆ. ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಆಗೋ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ಹೋಗಿ ಮನವರಿಕೆ ಮಾಡಿ