Select Your Language

Notifications

webdunia
webdunia
webdunia
webdunia

ಮೇಲ್ಸೇತುವೆ ಬೇಡ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ 2000ಕ್ಕೂ ಹೆಚ್ಚು ಮಕ್ಕಳು

ಮೇಲ್ಸೇತುವೆ ಬೇಡ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ 2000ಕ್ಕೂ ಹೆಚ್ಚು ಮಕ್ಕಳು
bangalore , ಭಾನುವಾರ, 29 ಜನವರಿ 2023 (17:37 IST)
ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅದರಲ್ಲಿ ಹಲವು ಯೋಜನೆಗಳು ಪರಿಸರಕ್ಕೆ ಹಾನಿಕಾರಕ ಎಂದು ಜನರು ವಿರೋಧ ವ್ಯಕ್ತಪಡಿಸಿದರೂ ಸರ್ಕಾರ ಅದಕ್ಕೆ ಕಿಂಚಿತ್ತೂ ಕಿಮ್ಮತ್ತು ಕೊಡುತ್ತಿಲ್ಲ.ಅಂತಹದ್ದೇ ಒಂದು ಬೆಂಗಳೂರಿನ ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಮೇಲ್ಸೇತುವೆ ಯೋಜನೆ ಇದೀಗಾ ಜನರ ಆಕ್ರೋಶಕ್ಕೆ ಕಾರಣವಾಗಿದೆ.
 
ಬೆಂಗಳೂರು ಅಭಿವೃದ್ಧಿಗೆಂದು ಬಿಬಿಎಂಪಿ ಕಡೆಯಿಂದ ಸಾಕಷ್ಟು ಯೋಜನೆಗಳು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದೆ. ಆದ್ರೆ ಎಲ್ಲೋ ಒಂದೆಡೆ ಇದು ನಮ್ಮ ಗಾರ್ಡನ್ ಸಿಟಿಯ ಹಸಿರನ್ನು ನಾಶಮಾಡಲು ಹೊರಟಿದೆ. ಇದನ್ನು ಕಂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ . ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹೊಸದಾಗಿ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ಹೊರಟಿದೆ. ಇದಕ್ಕೆಂದು ಸರಿ ಸುಮಾರು 50-60 ಮರಗಳ ಮಾರಣವಾಗುತ್ತದೆ ಎಂದು ತಿಳಿದಿದೆ. ಇದನ್ನು ಕೇಳಿದ ಸ್ಥಳೀಯರು ಆಕ್ರೋಶಗೊಂಡಿದ್ದಾರೆ
 
ಯೋಜನೆ ಪರಿಸರಕ್ಕೆ ಮಾರಕ ಎಂದು ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು, ಸ್ಥಳಿಯರ ಜೊತೆಗೆ ಈಗ ಶಾಲಾ ಮಕ್ಕಳು ಸಹ ಸ್ಯಾಂಕಿ ಕೆರೆ ಉಳಿವಿಗಾಗಿ ಪಣ ತೊಟ್ಟಿದ್ದಾರೆ.ನಗರದ ಸುಮಾರು 2000ಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
 
 ಪತ್ರದಲ್ಲಿ, " ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ" ಎಂದು ಬರೆಯಲಲಾಗಿದೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ. ಇದಕ್ಕೆ ಪರಿಸರವಾದಿಗಳು ಸೇರಿದಂತೆ ಸ್ಥಳಿಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಖ್ರಿ ವೃತ್ತದಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ವಿಸ್ತರಣೆ