Select Your Language

Notifications

webdunia
webdunia
webdunia
webdunia

ಕಾಂಗ್ರೆಸ್, ಜೆಡಿಎಸ್ ಬೆಂಬಲಿಗರ ಮೇಲೆ 250ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ನಡೆಸಲಿದ್ದಾರೆ- ಸಿಎಂ ಕುಮಾರಸ್ವಾಮಿ

ಕಾಂಗ್ರೆಸ್, ಜೆಡಿಎಸ್ ಬೆಂಬಲಿಗರ ಮೇಲೆ 250ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ನಡೆಸಲಿದ್ದಾರೆ- ಸಿಎಂ ಕುಮಾರಸ್ವಾಮಿ
ಮಂಡ್ಯ , ಗುರುವಾರ, 28 ಮಾರ್ಚ್ 2019 (10:05 IST)
ಮಂಡ್ಯ : ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

 ಐಟಿ ಇಲಾಖೆಯ ಬಾಲಕೃಷ್ಣ (ಐಆರ್ ಎಸ್ ಅಧಿಕಾರಿ) ಎಂಬವರ ನೇತೃತ್ವದಲ್ಲಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ನೆರವು ತೆಗೆದುಕೊಳ್ಳುತ್ತಾರೆ. ಆದರೆ ಅದನ್ನು ಬಿಟ್ಟು ಕೇಂದ್ರದ ಸಿಆರ್ ಪಿಎಫ್ ಕರೆಸಿಕೊಂಡು ದಾಳಿ ಮಾಡಲು ಹೊರಟಿರುವುದು ಬಹಳ ದಿನ ನಡೆಯಲ್ಲ. ಕೇಂದ್ರ ಸರ್ಕಾರದ ಬಿಜೆಪಿ ಪರ ಬಾಲಕೃಷ್ಣ ಅವರು ಬೆಳಗ್ಗೆ 5 ಗಂಟೆಗೆ ದಾಳಿ ಮಾಡಲು ಸಿದ್ಧರಾಗಿದ್ದು, ಇಂತಹ ದಾಳಿಗಳು ನಡೆದರೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಭಾಷಣದಲ್ಲಿ ನೋವಿನ ಛಾಯೆ ಇಲ್ಲ, ಕೇವಲ ಸಿನಿಮಾ ಡೈಲಾಗಷ್ಟೇ-ಸುಮಲತಾ ವಿರುದ್ಧ ಸಿಎಂ ವಾಗ್ದಾಳಿ