ಚಿಕ್ಕಮಗಳೂರು : ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಶೃಂಗೇರಿ ಕ್ಷೇತ್ರವ್ಯಾಪ್ತಿಯಲ್ಲಿನ 300ಕ್ಕೂ ಅಧಿಕ ಕಾರ್ಯಕರ್ತರು ಏಕಾ-ಏಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇದರಿಂದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ಕೊಟ್ಟಂತಾಗಿದೆ. ಶಾಸಕನ ವರ್ತನೆಯಿಂದ 300ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು, ಅವರೇ ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿ, ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿ ಜೈಕಾರ ಹಾಕಿದ್ದಾರೆ.