Select Your Language

Notifications

webdunia
webdunia
webdunia
webdunia

ನಾಳೆ 6 ಲಕ್ಷಕ್ಕೂ ಹೆಚ್ಚು ಲಾರಿಗಳ ಸಂಚಾರ ಸ್ಥಗಿತ

ನಾಳೆ 6 ಲಕ್ಷಕ್ಕೂ ಹೆಚ್ಚು ಲಾರಿಗಳ ಸಂಚಾರ ಸ್ಥಗಿತ
ಬೆಂಗಳೂರು: , ಗುರುವಾರ, 8 ಸೆಪ್ಟಂಬರ್ 2016 (16:57 IST)
ರಾಜ್ಯದಲ್ಲಿ ಸರಕುಗಳು, ಮರಳು ಮತ್ತಿತರ ಸಾಮಗ್ರಿಗಳನ್ನು ಸರಬರಾಜು ಮಾಡುವ 6 ಲಕ್ಷಕ್ಕೂ ಹೆಚ್ಚು ಲಾರಿಗಳು ಶುಕ್ರವಾರ ರಸ್ತೆಯಿಂದ ದೂರವುಳಿಯಲಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜಂಟರ ಸಂಘದ ಒಕ್ಕೂಟವು ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
 
 ಒಕ್ಕೂಟದ ಅಧ್ಯಕ್ಷ ಜಿ.ಆರ್. ಶಣ್ಮುಗಪ್ಪಾ ಸುಪ್ರೀಂಕೋರ್ಟ್ ಮಧ್ಯಂತರ ಆದೇಶವು ಅಚ್ಚುಕಟ್ಟು ಪ್ರದೇಶದ ರೈತರಿಗೆ ಆಘಾತಕಾರಿಯಾಗಿ ಬಂದಿದೆ. ನದಿನೀರಿನ ಮೇಲೆ ಅವಲಂಬಿತವಾದ ಜನರ ಹಿತಾಸಕ್ತಿ ರಕ್ಷಿಸುವಲ್ಲಿ ಸತತ ಸರ್ಕಾರಗಳ ವೈಫಲ್ಯವನ್ನು ನಾವು ಖಂಡಿಸುತ್ತೇವೆ ಎಂದು ಅವರು ಹೇಳಿದರು.
 
 ಒಕ್ಕೂಟದ ಸದಸ್ಯರು ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಬಂದ್ ದಿನ ಶಾಂತಿಯುತ ಪ್ರತಿಭಟನೆ ನಡೆಸುತ್ತಾರೆಂದು ಒಕ್ಕೂಟದ ಸದಸ್ಯರು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಸಿಬಿಐ ಮೇಲೆ ಹೇರಿದ್ದ ತಡೆ ತೆರವು