Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ 60ಕ್ಕೂ ಅಧಿಕ ಮಂದಿಗೆ ಗಾಯ

ಪಟಾಕಿ ಅವಘಡ
bangalore , ಬುಧವಾರ, 15 ನವೆಂಬರ್ 2023 (14:20 IST)
ದೀಪಾವಳಿ ಪಟಾಕಿ ಅವಘಡದಿಂದ ಬೆಂಗಳೂರಿನಲ್ಲಿ 60ಕ್ಕೂ ಅಧಿಕ ಮಂದಿಗೆ ಗಾಯವಾಗಿದ್ದು, ಹಲವರ ಕಣ್ಣಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.. ಪ್ರತಿ ವರ್ಷದ ಹಾಗೇ ಈ ಬಾರಿ ಕೂಡ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಲ್ಲಿ ಪಟಾಕಿ ಸಿಡಿದು ನಿನ್ನೆ ಒಂದೇ ದಿನ 13 ಜನರಿಗೆ ಗಾಯಗಳಾಗಿವೆ. ಭಾನುವಾರದಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಪುತ್ರಿಯರ ಮೇಲೆ ಅತ್ಯಾಚಾರವೆಸಗಲು ಬೆಂಬಲ ನೀಡಿದ ತಾಯಿ : ಆರೋಪಿ ಅರೆಸ್ಟ್