Select Your Language

Notifications

webdunia
webdunia
webdunia
webdunia

KSRನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ

Tamil Nadu
bangalore , ಬುಧವಾರ, 16 ಆಗಸ್ಟ್ 2023 (17:00 IST)
KSR ಡ್ಯಾಂನಿಂದ ತಮಿಳುನಾಡಿಗೆ ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ. ಭಾನುವಾರ KSR ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು KSR ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಕೆಆರ್‌ಎಸ್‌ನಿಂದ ರಾಜ್ಯಕ್ಕೆ ನೀರು ಬಿಡುಗಡೆಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಹನಿಟ್ರ್ಯಾಪ್ ಸುಂದರಿ ಖಾಕಿ ಬಲೆಗೆ