Select Your Language

Notifications

webdunia
webdunia
webdunia
webdunia

ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟಾರ್ ರವಿ ಪೂಜಾರಿ ಬೆಂಗಳೂರು ಪೊಲೀಸರ ವಶ

ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟಾರ್ ರವಿ ಪೂಜಾರಿ ಬೆಂಗಳೂರು ಪೊಲೀಸರ ವಶ
ಬೆಂಗಳೂರು , ಸೋಮವಾರ, 24 ಫೆಬ್ರವರಿ 2020 (10:20 IST)
ಬೆಂಗಳೂರು : ಭಾರತದ ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟಾರ್ ರವಿ ಪೂಜಾರಿ ಅವರನ್ನು ಬೆಂಗಳೂರು ಪೊಲೀಸರು  ವಶಕ್ಕೆ ಪಡೆದಿದ್ದಾರೆ.


ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಆಫ್ರಿಕಾದ ಸೆನೆಗಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಆತನನ್ನು ವಶಕ್ಕೆ ಪಡೆಯಲು ರಾಜ್ಯ ಪೊಲೀಸರು ಪ್ರಯತ್ನಿಸಿದ್ದರು. ಆದರೆ ಕಾನೂನು ತೊಡಕುಗಳಿಂದ ಹಸ್ತಾಂತರ ಸಾಧ್ಯವಾಗಿರಲಿಲ್ಲ.ಇದೀಗ ರವಿ ಪೂಜಾರಿಯನ್ನು ವಶಕ್ಕೆ ಪಡೆದಿರುವ ಬೆಂಗಳೂರು ಪೊಲೀಸರು ಇಂದು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.


ರಾಜ್ಯದಲ್ಲಿ ರವಿ ಪೂಜಾರಿ ವಿರುದ್ಧ 90ಕ್ಕೂ ಹೆಚ್ಚು ಕೇಸ್ ಗಳಿವೆ. ಬೆಂಗಳೂರು ನಗರದಲ್ಲಿಯೇ ಸುಮಾರು 39 ಪ್ರಕರಣಗಳಿವೆ. ನಗರದಲ್ಲಿನ 39 ಪ್ರಕರಣಗಳ ಪೈಕಿ 4 ಗಂಭೀರ ಪ್ರಕರಣಗಳು ರವಿ ಪೂಜಾರಿಯ ಮೇಲಿವೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕನ ಮೊಮ್ಮಗನ ಕಾರು ಅಪಘಾತ; ಪ್ರಶ್ನಿಸಲು ಬಂದ ಸ್ಥಳೀಯರ ಮೇಲೆ ಹಲ್ಲೆಗೆ ಯತ್ನ