Publish Date: Sat, 19 Nov 2022 (21:00 IST)
Updated Date: Sat, 19 Nov 2022 (23:10 IST)
ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೋರ್ವಳು ಜೀವನದಲ್ಲಿ ಜಿಗುಪ್ಸೆ ಹೊಂದಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಂಚನೂರಿನಲ್ಲಿ ನಡೆದಿದೆ. ಇದೇ ಗ್ರಾಮದ ಶಶಿಕಲಾ ಪರಸಪ್ಪ ಗೋಡಿ ತನ್ನ ಇಬ್ಬರು ಮಕ್ಕಳಾದ ಸುದೀಪ್, ರಾಧಿಕಾರೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತನ್ನ ಎರಡು ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸದ್ಯ ಪ್ರಕರಣ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.