Publish Date: Tue, 11 Jan 2022 (08:39 IST)
Updated Date: Tue, 11 Jan 2022 (09:41 IST)
ಮೈಸೂರು : ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.
ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.
ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.