ಚಿತ್ರದುರ್ಗ : ಮಗನಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.
ವಿಷ ಸೇವಿಸಿದ ನಾಲ್ಕು ವರ್ಷದ ಮಗು ಚಿತ್ರದುರ್ಗದಲ್ಲಿರುವ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ತಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿ ಕಿರುಕುಳದಿಂದ ಬೇಸತ್ತು ವನಿತಾ ಎಂಬ ಮಹಿಳೆ ತನ್ನ ನಾಲ್ಕು ವರ್ಷದ ಕಂದಮ್ಮಗೆ ವಿಷವುಣಿಸಿ ತಾನೂ ವಿಷ ಸೇವಿಸಿದ್ದಾರೆ. ಆದರೆ ಮಗು ಮೃತಪಟ್ಟಿದ್ದು, ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.