Select Your Language

Notifications

webdunia
webdunia
webdunia
webdunia

ವಾಹನ ಸವಾರರೇ ಹುಷಾರ್ ! ತುಮಕೂರಿನಲ್ಲಿ ಸರಣಿ ಅಪಘಾತ

ವಾಹನ ಸವಾರರೇ ಹುಷಾರ್ ! ತುಮಕೂರಿನಲ್ಲಿ ಸರಣಿ ಅಪಘಾತ
ತುಮಕೂರು , ಶನಿವಾರ, 2 ಸೆಪ್ಟಂಬರ್ 2023 (11:46 IST)
ತುಮಕೂರು : ಟಾಟಾ ಏಸ್, ಕ್ಯಾಂಟರ್ ಹಾಗೂ ಖಾಸಗಿ ಬಸ್ ಮಧ್ಯೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.
 
ಚಿಕ್ಕನಹಳ್ಳಿ ಬಳಿ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಟಾಟಾ ಏಸ್ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಅರಳಗುಡಿ ಗ್ರಾಮದ ಭೀಮಾಬಾಯಿ (70) ಹಾಗೂ ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಮೃತರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ. 

ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬಂದಿಯಿಂದ ಟಾಟಾ ಏಸ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಬಂದ್ : ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ