Webdunia - Bharat's app for daily news and videos

Install App

ನಾಳೆ ವಾಹನ ಸವಾರರೇ ಫ್ರೀಡಂ ಪಾರ್ಕ್ ನ ರಸ್ತೆಗೆ ಇಳಿಯುವ ಮುನ್ನ ಯೋಚಿಸಿ

Webdunia
ಬುಧವಾರ, 6 ಜುಲೈ 2022 (20:50 IST)
ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ  ಗುತ್ತಿಗೆ, ಹೊರಗುತ್ತಿಗೆ ನೌಕರರು ನಾಳೆ ಬೆಂಗಳೂರು ಚಲೋ ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿಲ್ಲ. ಮೌಲ್ಯಮಾಪನದಂತ ಪದ್ಧತಿಯನ್ನು ರದ್ದುಗೊಳಿಸಬೇಕು. ಶ್ರೀನಿವಾಸಾಚಾರಿ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂಬುದಾಗಿ ಒತ್ತಾಯಿಸಿ ಜುಲೈ.7ರ ನಾಳೆ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರೆಲ್ಲರೂ ಭಾಗವಹಿಸುವಂತೆ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಾಮೋಜಿ ಹೇಳಿದ್ದಾರೆ.
ಮೂರು ತಿಂಗಳ ಮೌಲ್ಯಮಾಪವನ್ನು ರಾಜ್ಯ ಸರ್ಕಾರ ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ನಮ್ಮ ಎಲ್ಲಾ ಬೇಡಿಕೆಗಳ ಸಂಬಂಧ ಮಾನ್ಯ ಆರೋಗ್ಯ ಸಚಿವರೊಂದಿಗೆ ಸಂಪೂರ್ಣ ಚರ್ಚೆ ನಡೆಸಲಾಗಿದೆ. ಆ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ, ಸರ್ಕಾರ ಆದೇಶ ಹೊರಡಿಸಬೇಕು ಎಂದರು.
 
ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಬೆಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ನಗರ ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ. ಜಿಲ್ಲಾ, ತಾಲೂಕು, ಗ್ರಾಮೀಣ ಭಾಗದಿಂದಲೂ ಗುತ್ತಿಗೆ, ಹೊರಗುತ್ತಿಗೆಯ ಸಾವಿರಾರು ನೌಕರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ಬೇಡಿಕೆ ಈಡೇರಿಸೋವರೆಗೆ ಪ್ರತಿಭಟನೆ ಮುಂದುವರೆಯಲಿದೆ. ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments