Publish Date: Fri, 05 Oct 2018 (19:28 IST)
Updated Date: Fri, 05 Oct 2018 (19:44 IST)
ಕಾಂಗ್ರೆಸ್ ಜತೆಗೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಮಾಡಿಕೊಳ್ಳಲು ಮಧ್ಯಪ್ರದೇಶದಲ್ಲಿ ಬಿಎಸ್ಪಿ ನಿರಾಕರಿಸಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿಯಿಂದ ಯಾವುದೇ ಭಂಗ ತರುವುದಿಲ್ಲ ಎಂದ ಎಐಸಿಸಿ ಅಧ್ಯಕ್ಷ ಹೇಳಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ವಿಭಿನ್ನ ನಡೆಗೆ ಮುಂದಾಗಿದೆ. ಮೈತ್ರಿ ಪಕ್ಷಗಳಿಂದ ಹೊರ ಹೋದ ಹಾಗೂ ಇತರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿರ್ಧಾರ ಮಾಡಿದಂತಿದೆ.
ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿಗೆ ಬಿಎಸ್ಪಿ ನಿರಾಕರಿಸಿದೆ.
ಆದರೆ ಎಂಪಿ ಚುನಾವಣೆಯಲ್ಲಿ ಆ ಪಕ್ಷದಿಂದ ಯಾವುದೇ ಭಂಗ ಆಗುವುದಿಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಬಿಎಸ್ಪಿ ಸೇರಿದಂತೆ ವಿರೋಧ ಪಕ್ಷಗಳು ಒಟ್ಟಾಗಿ ಎಂಪಿ ಚುನಾವಣೆ ಎದುರಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.