ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಯಾಕೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಗೊತ್ತಿಲ್ಲ. ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ. ಒಂದು ವೇಳೆ ಅವರು ಒಪ್ಪದಿದ್ದರೆ ನಾನು ಕೂಡ ಅವರ ಹಾದಿಯನ್ನೇ ತುಳಿಯುತ್ತೇನೆ ಎಂದು ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಸ್.ಎಂ.ಕೃಷ್ಣ ಅವರ ಅತೀ ಸಮೀಪದ ವ್ಯಕ್ತಿ. ಅವರ ಬಗ್ಗೆ ಅಪಾರವಾದ ಗೌರವ ಇದೆ. ರಾಜೀನಾಮೆ ಹಿಂಪಡೆಯುವಂತೆ ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ ಎಂದರು.
ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಧಿವೃದ್ಧಿ ದೃಷ್ಟಿಯಿಂದ ಸಾಕಷ್ಟು ನೆರವು ನೀಡಿದ್ದಾರೆ. ಸಾಕಷ್ಟು ಸಹಕಾರ ನೀಡಿ ನಮ್ಮನ್ನೆಲ್ಲ ಬೆಳೆಸಿದ್ದಾರೆ. ಎಸ್.ಎಂ.ಕೃಷ್ಣ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಹಿನ್ನೆಡೆಯಾಗುವುದು ಶತಸಿದ್ಧ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ