Select Your Language

Notifications

webdunia
webdunia
webdunia
webdunia

ಕೊಟ್ಟ ಮಾತಿಗೆ ತಪ್ಪಿದೇನೆಂದು ಕ್ಷಮೆಯಾಚಿಸಿದ ಸಂಸದ ಪ್ರತಾಪ್ ಸಿಂಹ

ಕೊಟ್ಟ ಮಾತಿಗೆ ತಪ್ಪಿದೇನೆಂದು ಕ್ಷಮೆಯಾಚಿಸಿದ ಸಂಸದ ಪ್ರತಾಪ್ ಸಿಂಹ
bangalore , ಮಂಗಳವಾರ, 16 ಆಗಸ್ಟ್ 2022 (20:06 IST)
ಆಗಸ್ಟ್ 15ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಒನ್ ವೇ ಸಂಚಾರಕ್ಕೆ ಚಾಲನೆ ನೀಡಬೇಕಿತ್ತು. ಆದ್ರೇ ದಶಪಥ ಕಾಮಗಾರಿಯಿಂದಾಗಿ ಬೆಂಗಳೂರು - ಮೈಸೂರು ಹೆದ್ದಾರಿ ಮೊದಲ ಹಂತದ ಕಾಮಗಾರಿ ವಿಳಂಬವಾಗಿದೆ. ಹೀಗಾಗಿ ಕೊಟ್ಟ ಮಾತಿಗೆ ತಪ್ಪಿದ್ದೇನೆ. ದಯವಿಟ್ಟು ಕ್ಷಮಿಸಿ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಜನತೆಯ ಕ್ಷಮೆಯಾಚಿಸಿದ್ದಾರೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿದ್ದು, ಜುಲೈನಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆಯನ್ನು ಸಂಚಾರಕ್ಕೆ ತೆರವು ಮಾಡಿಸುತ್ತೇನೆ ಎಂದಿದ್ದೆ, ನಂತರ ಆಗಸ್ಟ್ 15 ರಂದು ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್ ಓಪನ್ ಮಾಡುತ್ತೇವೆ ಎಂದೆ. ಮಾತಿಗೆ ತಪ್ಪಿದ್ದೇನೆ, ದಯವಿಟ್ಟು ಕ್ಷಮಿಸಿ. ಎಲ್ಲ ಪ್ರಯತ್ನಗಳ ನಡುವೆಯೂ ಇನ್ನೂ ವಾರ, ಹತ್ತು ದಿನಗಳ ಕೆಲಸ ಬಾಕಿಯಿದೆ. ಗುಡ್ಡ ಕಡಿದು ರಸ್ತೆ ನಿರ್ಮಾಣ ನಡೆಯುತ್ತಿದೆ, ಸ್ವಲ್ಪ ಕಾಲಾವಕಾಶ ನೀಡಿ, ಪ್ಲೀಸ್ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಹುಟ್ಟಿರುವುದೇ ಹಿಂದೂರಾಷ್ಟ್ರ ನಿರ್ಮಾಣಕ್ಕೆ -ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್