ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಸಂಸದರು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.
ಸಂಸದರು ಆಯ್ಕೆ ಮಾಡಿರುವ ಕ್ಷೇತ್ರಗಳಲ್ಲಿರುವ ಬಿಜೆಪಿ ಮುಖಂಡರು ಟಿಕೆಟ್ ನಮಗೆ ಬೇಕು. ಸಂಸದರಾಗಿ ಆಯ್ಕೆಯಾಗಿರುವವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡುವುದು ಬೇಡ ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಫಲಿತಾಂಶದಿಂದ ಪ್ರೇರಣೆಗೊಂಡಿರುವ ಬಿಜೆಪಿ ಸಂಸದರು ಒಂದು ವೇಳೆ ಶಾಸಕರಾಗಿ ಆಯ್ಕೆಯಾದಲ್ಲಿ ಸಚಿವ ಸ್ಥಾನ ಪಡೆಯಬಹುದು. ಕೇವಲ ಸಂಸದರಾಗಿಯೇ ಮುಂದುವರಿಯುವುದು ಯಾವ ಪುರುಷಾರ್ಥಕ್ಕೆ ಎಂದು ಹೈಕಮಾಂಡ್ ಮುಖಂಡರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿ ಅಂತ ಕೆಲ ಸಂಸದರು ಬಿಜೆಪಿ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಸಂಸದರ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು, ಸದ್ಯಕ್ಕೆ ಎಂಪಿಗಳಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಆದರೆ, ಸಂಸದರ ಮನವಿಯನ್ನು ತಿರಸ್ಕರಿಸಿರುವ ಹೈಕಮಾಂಡ್ ಹಾಲಿ ಸಂಸದರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಬಿಜೆಪಿಯ ಘಟಾನುಘಟಿ ನಾಯಕರಾದ ಶೋಭಾ ಕರಂದ್ಲಾಜೆ(ಪುತ್ತೂರು ) ಅನಂತಕುಮಾರ್ ಹೆಗಡೆ(ಯಲ್ಲಾಪುರ ಕ್ಷೇತ್ರ)ಕರಡಿ ಸಂಗಣ್ಣ(ಕೊಪ್ಪಳ ಕ್ಷೇತ್ರ), ಶ್ರೀರಾಮುಲು (ಬಳ್ಳಾರಿ ಗ್ರಾಮಾಂತರ) ಪಿ.ಸಿ.ಮೋಹನ್(ಗಾಂಧಿನಗರ ಕ್ಷೇತ್ರ)ದಿಂದ ಟಿಕೆಟ್ ನೀಡುವಂತೆ ಹೈಕಮಾಂಡ್ ನಾಯಕರಲ್ಲಿ ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.