Publish Date: Tue, 19 Dec 2017 (09:13 IST)
Updated Date: Tue, 19 Dec 2017 (09:15 IST)
ನವದೆಹಲಿ: ಬಳ್ಳಾರಿ ಸಂಸದ ಶ್ರೀರಾಮುಲು ಅವರ ದೆಹಲಿಯ ಫಿರೋಜ್ ಶಾ ರಸ್ತೆಯಲ್ಲಿರುವ ಮನೆಯಲ್ಲಿ ಇಂದು ಬೆಳಗಿನ ಜಾವ ಬೆಂಕಿ ಅನಾಹುತ ಸಂಭವಿಸಿದೆ.
ಇಂದು ಬೆಳಗಿನ ಜಾವ 4 ರಿಂದ 5 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಸಂಸದ ಶ್ರೀರಾಮುಲು ಕೂಡಾ ಮನೆಯೊಳಗಿದ್ದರು ಎನ್ನಲಾಗಿದೆ. ಅವರ ಬೆಡ್ ರೂಂ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಇದು ಪಕ್ಕದ ಕೊಠಡಿಗೂ ಹಬ್ಬಿದೆ.
ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ