Select Your Language

Notifications

webdunia
webdunia
webdunia
Wednesday, 5 March 2025
webdunia

ಈಶ್ವರಪ್ಪನವರೇ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ: ಬಿಎಸ್‌ವೈ ಪರ ಶ್ರೀರಾಮಲು ಬ್ಯಾಟಿಂಗ್

ಈಶ್ವರಪ್ಪನವರೇ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ: ಬಿಎಸ್‌ವೈ ಪರ ಶ್ರೀರಾಮಲು ಬ್ಯಾಟಿಂಗ್
ಬಳ್ಳಾರಿ , ಗುರುವಾರ, 19 ಜನವರಿ 2017 (17:17 IST)
ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಮಾತ್ರ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಸಿಗುತ್ತೆ. ಹೀಗಾಗೆ ಈಶ್ವರಪ್ಪನವರೇ ದಯವಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ಸಂಸದ ಶ್ರೀರಾಮಲು ಬಿಎಸ್‌ವೈ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿ.ಎಸ್.ಯಡಿಯೂರಪ್ಪ ಅವರ ಕಾಲೆಳೆದರೇ ರಾಜ್ಯ ಬಿಜೆಪಿ ಘಟಕದಲ್ಲಿ ಸಮಸ್ಯೆಯಾಗುತ್ತದೆ. ಮುಂಬರುವ ವಿಧಾನಸಭೆ ಚುಣಾವಣೆ ಎದುರಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಸ್ಥಾಪಿಸಬೇಕಾದರೆ ನಾವೆಲ್ಲರೂ ಸೇರಿ ಬಿಎಸ್‌ವೈ ಅವರಿಗೆ ಬೆಂಬಲ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. 
 
ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಈಶ್ವರಪ್ಪ ಅವರಿಗೂ ಲಾಭವಾಗುತ್ತದೆ. ಆದರೆ, ಸಣ್ಣಪುಟ್ಟ ವೈಮನಸ್ಸಿನಿಂದ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪರಲ್ಲಿ ಸಂಸದ ಶ್ರೀರಾಮಲು ಅವರು ಮನವಿ ಮಾಡಿಕೊಂಡಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ ಮಾಜಿ ಸಚಿವ ವಿ.ಸೋಮಣ್ಣ