ನಾಳೆ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆ

Sampriya
ಗುರುವಾರ, 4 ಏಪ್ರಿಲ್ 2024 (18:42 IST)
Photo Courtesy X
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರವಾಗಿ ನಿಂತು ಗೆಲುವು ಸಾಧಿಸಿದ್ದ ಸಂಸದೆ ಸುಮಲತಾ ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿದ್ದಾರೆ.

ಈ ಬಾರಿ ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಟಿಕೆಟ್ ಮಿಸ್ ಆಗಿದ್ದರಿಂದ ಮುನಿಸಿಕೊಂಡಿದ್ದ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಡ್ಯ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಬೆಂಬಲ ಕೋರಿದ್ದರು.  

ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ ಸುಮಲತಾ ಅವರು ಮೋದಿಗೆ ಬೆಂಬಲ ಸೂಚಿಸಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಹೇಳಿದರು. ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ  ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿಸಿದ್ದಾರೆ.

ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್  2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು  ಅವರು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments