ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಮಿಸ್ಟರ್ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ಮಿಸ್ಟರ್ ಡಿಕೆಶಿಯವರೇ, ನಿಮ್ಮ ಈ ಕಸನು ಎಂದಿಗೂ ಈಡೇರುವುದಿಲ್ಲ. ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು. ಇವತ್ತು ಕುಮಾರಸ್ವಾಮಿ ಅವರು ಗಟ್ಟಿಯಾದ ಸಂದೇಶ ಕೊಟ್ಟಿದ್ದಾರೆ. ನಮ್ಮ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಹಾಗೆ ಭಾವಿಸಿದ್ದರೆ ಅದು ಅವರ ಭ್ರಮೆ ಅಷ್ಟೇ ಅಂತಾ HD ದೇವೇಗೌಡಾ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದ್ದಾರೆ.