Select Your Language

Notifications

webdunia
webdunia
webdunia
Tuesday, 1 April 2025
webdunia

ಸರ್ಕಾರಕ್ಕೆ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ!

ಮೀಸಲಾತಿ
ಬೆಳಗಾವಿ , ಸೋಮವಾರ, 19 ಡಿಸೆಂಬರ್ 2022 (12:01 IST)
ಬೆಳಗಾವಿ : ಡಿಸೆಂಬರ್ 22 ರಂದು ಸುವರ್ಣ ಸೌಧದ ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡುವ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸಲು ಸರ್ಕಾರಕ್ಕೆ ಡಿಸೆಂಬರ್ 19 ರವರೆಗೂ ಗಡುವು ನೀಡಲಾಗಿದೆ. ಮೀಸಲಾತಿ ಕೊಟ್ಟರೆ ವಿಜಯೋತ್ಸವ ಮಾಡುತ್ತೇವೆ.

ಇಲ್ಲವಾದ್ರೆ ಡಿಸೆಂಬರ್ 22 ರಂದು ಸುವರ್ಣ ವಿಧಾನ ಸೌಧ ಮುತ್ತಿಗೆ ಹಾಕುತ್ತೇವೆ. ಮೀಸಲಾತಿಗಾಗಿ ಕಳೆದ ಎರಡು ವರ್ಷಗಳಿಂದ ಸುಧೀರ್ಘ ಹೋರಾಟ ಮಾಡಿದ್ದೇವೆ.

ಡಿಸೆಂಬರ್ 19 ರಂದು ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ರು. ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಘೋಷಣೆ ಮಾಡುವ ಭರವಸೆ ಇದೆ. ಮುಖ್ಯಮಂತ್ರಿಗಳ ನಿಲುವು ನೋಡಿಕೊಂಡು ಹೋರಾಟ ಮಾಡುತ್ತೇವೆ ಎಂದಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಯನ್ನು ಊಟಕ್ಕೆಂದು ಮನೆಗೆ ಕರೆಸಿ ಮಗನಿಂದಲೇ ರೇಪ್ ಮಾಡಿಸಿದ ತಾಯಿ!