Publish Date: Mon, 18 Nov 2019 (10:30 IST)
Updated Date: Mon, 18 Nov 2019 (10:32 IST)
ಹೊಸಕೋಟೆ : ಮಾಧ್ಯಮಗಳ ಮುಂದೆ ಚರ್ಚೆಗೆ ಬರುವಂತೆ ರಾಜಕೀಯ ಗುರು ಸಿದ್ದರಾಮಯ್ಯ ಅವರಿಗೆ ಅವರ ಶಿಷ್ಯ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ.
ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 40 ವರ್ಷ ರಾಜಕೀಯದಲ್ಲಿ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.
ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತಾ ಫಲಿತಾಂಶದ ಬಳಿಕ ಗೊತ್ತಾಗುತ್ತೆ. ಚುನಾವಣಾ ಫಲಿತಾಂಶ ಸಿದ್ದರಾಮಯ್ಯರ ಸುಳ್ಳು ಆರೋಪಗಳಿಗೆ ಉತ್ತರ ಕೊಡುತ್ತೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.