Select Your Language

Notifications

webdunia
webdunia
webdunia
webdunia

Siddaramaiah: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

Siddaramaiah

Krishnaveni K

ಬೆಂಗಳೂರು , ಬುಧವಾರ, 15 ಜನವರಿ 2025 (09:50 IST)
ಬೆಂಗಳೂರು:  ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ. ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ತೀರ್ಪು ಇಂದು ಹೈಕೋರ್ಟ್ ನೀಡಲಿದೆ.

ಮುಡಾ ಹಗರಣ ತನಿಖೆಯನ್ನು ಇದೀಗ ಲೋಕಾಯುಕ್ತ ಪೊಲೀಸರು ನಡೆಸುತ್ತಿದ್ದಾರೆ. ಆದರೆ ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆ. ಹೀಗಾಗಿ ಲೋಕಾಯುಕ್ತ ತನಿಖೆಯಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿಲ್ಲ ಎಂದು ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ತೀರ್ಪು ಕಾಯ್ದಿರಿಸಿದೆ. ನ್ಯಾ. ನಾಗಪ್ರಸನ್ನ ನೇತೃತ್ವದ ಪೀಠ ಇಂದು ಪ್ರಕರಣವನ್ನು ಸಿಬಿಐಗೆ ವಹಿಸಬೇಕೇ ಎಂಬ ವಿಚಾರವಾಗಿ ತೀರ್ಪು ನೀಡಲಿದೆ. ಒಂದು ವೇಳೆ ಹೈಕೋರ್ಟ್ ಸಿಬಿಐಗೆ ವಹಿಸಲು ಒಪ್ಪಿಗೆ ನೀಡಿದರೆ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆಯಾಗಲಿದೆ ನೋಡಿ