Publish Date: Mon, 28 Oct 2024 (18:12 IST)
Updated Date: Mon, 28 Oct 2024 (18:15 IST)
ಮೈಸೂರು: ಮುಡಾ ನಿವೇಶನ ಹಗರಣ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ರಾಕೇಶ್ ಪಾಪಣ್ಣ ಅವರ ಮೈಸೂರಿನ ನಿವಾಸ ಹಾಗೂ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರ ಬೆಂಗಳೂರಿನ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ.
ಸಿಎಂ ಆಪ್ತ ರಾಕೇಶ್ ಪಾಪಣ್ಣಗೂ ಶಾಕ್ ನೀಡಿರುವ ಜಾರಿ ನಿರ್ದೇಶನಾಲಯ ಮೈಸೂರಿನ ಹಿನಕಲ್ ನಿವಾಸದ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನೂ ಬೆಂಗಳೂರಿನ ಮಲ್ಲೇಶ್ವರದ 10ನೇ ಕ್ರಾಸ್‌ನಲ್ಲಿರುವ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ದಾಳಿ ನಡೆಸಿದ ಅಧಿಕಾರಿಳು ತೀವ್ರ ಶೋಧ ನಡೆಸುತ್ತಿದ್ದಾರೆ. ವಿವಿಧ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.