ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ: ಸಿದ್ದರಾಮಯ್ಯ ಆಪ್ತನ ದಿಢೀರ್‌ ಈ ನಿರ್ಧಾರಕ್ಕೆ ಕಾರಣವೇನು

Sampriya
ಬುಧವಾರ, 16 ಅಕ್ಟೋಬರ್ 2024 (14:00 IST)
Photo Courtesy X
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ಅವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್ ಅವರಿಗೆ ಇಂದು ರಾಜೀನಾಮೆ ಸಲ್ಲಿಸಿದರು.

ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕಚೇರಿಗೆ ಹಾಜರಾಗಿ ರಾಜೀನಾಮೆ ಸಲ್ಲಿಸಿದರು.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ರು. ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ‌. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಪ್ರತಿಕ್ರಿಯಿಸಿದರು.


ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಅಂತ ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯ ಹೊರಬರುತ್ತೆ‌. ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೆ‌. ಸೈಟ್ ವಿಚಾರವಾಗಿ ಸಿಎಂ ಅವರು ಯಾವುದೇ ಒತ್ತಡ ನನ್ನ ಮೇಲೆ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

ಎರಡು ಬಾರಿ ಸ್ಟ್ರೋಕ್ ಆಯ್ತು. ಆರೋಗ್ಯ ಸರಿಯಿಲ್ಲ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಆಗೊಲ್ಲ ಅಂತ ರಾಜೀನಾಮೆ ಕೊಟ್ಟಿದ್ದೇನೆ. ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದ್ರು ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments