ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಉರುಳಾಗುತ್ತ 400 ಪುಟಗಳ ದಾಖಲೆ

Sampriya
ಶನಿವಾರ, 20 ಜುಲೈ 2024 (17:03 IST)
Photo Courtesy X
ಬೆಂಗಳೂರು: ಮುಡಾ ಸೈಟ್ ಹಂಚಿಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್​. ರಮೇಶ್ ಅವರು  ದಾಖಲೆ ಸಮೇತ ಲೋಕಾಯುಕ್ತಕ್ಕೆ ಶನಿವಾರ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ 400ಕ್ಕೂ ಹೆಚ್ಚು ಪುಟಗಳ ದಾಖಲೆ ಸಮೇತ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ದೊಡ್ಡ ಸದ್ದು ಮಾಡುತ್ತಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ.  ಪ್ರತಿಪಕ್ಷಗಳು ಸದನದ ಒಳಗೆ ಮತ್ತು ಹೊರಗೆ ತೀವ್ರ ಹೋರಾಟ ನಡೆಸುತ್ತಿವೆ. ಇದೀಗ ಬಿಜೆಪಿ ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದೆ.

ಲೋಕಯುಕ್ತಕ್ಕೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ ಆರ್ ರಮೇಶ್ ಅವರು, 1997-98ರಲ್ಲಿ ಜೆ ಎಚ್​ ಪಟೇಲ್​ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸ್ವಾಧೀನಪಡಿಸಿಕೊಂಡ ದೇವನೂರು ಮೂರನೇ ಬಡಾವಣೆಯನ್ನು ಮುಡಾ ಕೈ ಬಿಡುವಂತೆ ಅಧಿಸೂಚನೆ ಹೊರಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದರು. ಅಲ್ಲದೆ 2004-05ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಇದೇ ಭೂಮಿಯನ್ನು ಮೃತ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು ಎಂದು ಗಂಭೀರ ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments