ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 9ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಇದೀಗ ಈ ಪ್ರಕರಣ ಅಂತಿ ಹಂತಕ್ಕೆ ತಲುಪಿದ್ದು, ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆ ಪೂರ್ಣಗೊಳ್ಳಲಿದೆ.
ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಒಂದು ವಾರಗಳ ಬಳಿಕ ಮಧ್ಯಂತರ ರಿಲೀಫ್ ಸಿಕ್ಕಿದೆ.
ಸಿಎಂ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಮಂಡಿಸಿದ ಸುದೀರ್ಘ ವಾದದ ಬಳಿಕ ಇಂದು ದೂರುದಾರ ಸ್ನೇಹಮಯಿ ಕೃಷ್ಣ ಪರ ಕೆ.ಜಿ.ರಾಘವನ್ ವಾದಮಂಡಿಸಿದರು.<>