ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ಚುರುಕು ಮಾಡಿದ್ದು, ಇದೀಗ ತನಿಖೆ ಸಂಬಂಧ ಸಚಿವ ಭೈರತಿ ಸುರೇಶ್ ಅವರ ಸಚಿವಾಲಯದ ಸಿಬ್ಬಂದಿಗೂ ನೋಟಿಸ್ ಅನ್ನು ನೀಡಲಾಗಿದೆ.
ಇಂದು ವಿಧಾನಸೌಧದ ನಗಾರಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ನೋಟಿಸ್ ಇಡಿ ನೋಟಿಸ್ ಜಾರಿ ಮಾಡಿದ್ದು, ನಾಳೆ 11ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸಮನ್ಸ್ ನೀಡಿದ ಇಡಿ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮುಡಾ ನಗರಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ.
ಮುಡಾ ಹಗರಣದ ಪ್ರಕರಣದ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸೇರಿದಂತೆ ಪ್ರಮುಖ ಆರೋಪಿಗಳ ವಿಚಾರಣೆಯನ್ನು ಇಡಿ ಅಧಿಕಾರಿಗಳು ಮಾಡಿದ್ದಾರೆ.