ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.
ಇಂದು ಬೆಳಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ಸುಮಾರು ಐದಾರು ಗಂಟೆಗಳ ಸುದೀರ್ಘ ವಾದ-ವಿವಾದ ಆಲಿಸಿದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದರು. ಇನ್ನು ಹಿರಿಯ ವಕೀಲ ಕೆ.ಜಿ ರಾಘವನ್ ಸಹ ವಾದಮಂಡನೆಗೆ ಅವಕಾಶ ಕೋರಿದ್ದಾರೆ.
ವಾದ-ವಿವಾದದ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿಗಳು ಬಹಳ ಜನ ವಾದ ಮಂಡನೆ ಮಾಡಿದ್ದೀರಿ. ಆದರೆ ಇದರಲ್ಲಿ ಸಿಎಂ ಪಾತ್ರ ಏನು ಎಂದು ಯಾರು ಹೇಳುತ್ತಿಲ್ಲ. ಸಿಎಂ ಪಾತ್ರದ ಬಗ್ಗೆ ನಿಮ್ಮ ಉತ್ತರವೇನು ಎಂದು ದೂರುದಾರರ ಪರ ವಕೀಲರಿಗೆ ಪ್ರಶ್ನೆ ಮಾಡಿದರು.
<>