Select Your Language

Notifications

webdunia
webdunia
webdunia
webdunia

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು: ಸಂಸದ ಯದುವೀರ್‌ ಆಗ್ರಹ

MP Yaduveer

Sampriya

ಮೈಸೂರು , ಶನಿವಾರ, 19 ಅಕ್ಟೋಬರ್ 2024 (14:27 IST)
Photo Courtesy X
ಮೈಸೂರು: ಮುಡಾದಲ್ಲಿ ₹5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದ್ದು, ಈಗಾಲಾದರೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದರು.

 ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಇ.ಡಿ. ದಾಳಿ ರಾಜಕೀಯ ಪ್ರೇರಿತ ಅಲ್ಲ. ಕೇವಲ 14 ನಿವೇಶನಗಳು ಮಾತ್ರವಲ್ಲ, ಇಡೀ ಹಗರಣದ ಸಮಗ್ರ ತನಿಖೆ ಆಗಬೇಕು ಎಂದು ಕೋರಿದರು.

ಮುಡಾದಲ್ಲಿ ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ ಎಂದರು.

ಸತತ ಮೂರು ಬಾರಿ ಇ.ಡಿ. ದಾಖಲೆ ಕೇಳಿದ್ದರೂ ಮುಡಾ ಅಧಿಕಾರಿಗಳು ನೀಡಿಲ್ಲ. ಹೀಗಾಗಿಯೇ ಈ ದಾಳಿ ನಡೆದಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಕಾನೂನಾತ್ಮಕ ಹೋರಾಟ ಮುಂದುವರಿಸಲಿದೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನದ ದುಡ್ಡಿನಿಂದ ವಕ್ಫ್ ಆಸ್ತಿಗೆ 100 ಕೋಟಿ ರೂ. ಕಂಪೌಂಡ್ ಕಟ್ತಾರೆ: ಬಸನಗೌಡ ಪಾಟೀಲ್ ಯತ್ನಾಳ್