MUDA Scam, ಸಿಎಂ ಸಿದ್ದರಾಮಯ್ಯಗೆ ಮತ್ತೇ ಎರಡು ದಿನ ರಿಲೀಫ್

Sampriya
ಗುರುವಾರ, 29 ಆಗಸ್ಟ್ 2024 (16:45 IST)
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಇಂದು ನಡೆದಿದ್ದು, ವಾದ ಪ್ರತಿವಾದ ಆಲಿಸಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳ ಕಾಲ ರಿಲೀಫ್ ಸಿಕ್ಕಿದೆ.

ಇಂದು (ಆಗಸ್ಟ್ 29) ಹೈಕೋರ್ಟ್​ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದರು. ಇನ್ನು ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಅವರು ಶನಿವಾರ ವಾದ ಮಂಡಿಸುವುದಾಗಿ ಕೋರ್ಟ್​ಗೆ ತಿಳಿಸಿದರು.‌

ಇದಕ್ಕೆ ಕೋರ್ಟ್​ ಸಹ ಒಪ್ಪಿಗೆ ನೀಡಿದೆ. ಇದರೊಂದಿಗೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್ ಇದೇ 31ಕ್ಕೆ ಮುಂದೂಡಿದೆ.

ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಇನ್ನು ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೂ ಸಹ ಸೂಚನೆ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments