Publish Date: Fri, 08 Sep 2023 (18:08 IST)
Updated Date: Fri, 08 Sep 2023 (19:55 IST)
ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.