Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗೆ ವಿದಾಯ ಹೇಳಿದ ಮುಖ್ಯಮಂತ್ರಿ ಚಂದ್ರು!

ಕಾಂಗ್ರೆಸ್ ಗೆ ವಿದಾಯ ಹೇಳಿದ ಮುಖ್ಯಮಂತ್ರಿ ಚಂದ್ರು!
bengaluru , ಭಾನುವಾರ, 29 ಮೇ 2022 (14:44 IST)
ಕಾಂಗ್ರೆಸ್ ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಚಂದ್ರು ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸದೇ ಕಡೆಗಣಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
 “ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದೇಶದಲ್ಲೆ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆ ಹೊಂದಿದೆ. ಪಕ್ಷಕ್ಕೆ ಸೇರಿದಾಗಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
“ಇದುವರೆಗೆ ನನಗೆ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು” ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ