ಆರ್ ಅಶೋಕ್ ಗೇ ಎಚ್ಐವಿ ಇಂಜೆಕ್ಷನ್: ಬಿಜೆಪಿಯಲ್ಲಿನ್ನು ಮುನಿರತ್ನ ಖೇಲ್ ಖತಂ

Krishnaveni K
ಶುಕ್ರವಾರ, 20 ಸೆಪ್ಟಂಬರ್ 2024 (15:56 IST)
Photo Credit: Facebook
ಬೆಂಗಳೂರು: ಎಚ್ಐವಿ ಸೋಂಕಿತರ ಜೊತೆ ಲೈಂಗಿಕ ಕ್ರಿಯೆ ನಡೆಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಆರ್ ಅಶೋಕ್ ಗೇ ಎಚ್ಐವಿ ಇಂಜೆಕ್ಟ್ ಮಾಡಲು ಹೊರಟಿದ್ದರಾ? ಹೀಗೊಂದು ಶಾಕಿಂಗ್ ನ್ಯೂಸ್ ಬಂದಿದೆ.

ಆರ್ ಅಶೋಕ್ ಬಿಜೆಪಿಯ ಪ್ರಮುಖ ನಾಯಕ, ಪ್ರಸಕ್ತ ವಿಪಕ್ಷ ನಾಯಕನೂ ಹೌದು. ಆದರೆ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದು ಶಾಸಕರಾಗಿರುವ ಮುನಿರತ್ನ ಬಿಜೆಪಿಯಲ್ಲಿ ಈಗ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದರು. ಹೀಗಾಗಿ ಅಶೋಕ್ ರನ್ನು ಹಣಿಯಲು ಎಚ್ಐವಿ ಇಂಜೆಕ್ಷನ್ ರೆಡಿ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.

ಮುನಿರತ್ನ ಎಚ್ಐವಿ ಇಂಜೆಕ್ಟ್ ಮಾಡಿ ಹನಿಟ್ರ್ಯಾಪ್ ಮಾಡುತ್ತಿದ್ದರು ಎಂದು ಆರೋಪಗಳು ಕೇಳಿಬಂದ ಬೆನ್ನಲ್ಲೇ ಬಿಜೆಪಿ ನಾಯಕರು ಅಲರ್ಟ್ ಆಗಿದ್ದಾರೆ. ಇದು ಸಾಬೀತಾದರೆ ಪಕ್ಷಕ್ಕೆ ಭಾರೀ ಡ್ಯಾಮೇಜ್ ಆಗಲಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ಮುನಿರತ್ನ ಪ್ರಕರಣ ಇಟ್ಟುಕೊಂಡು ಬಿಜೆಪಿ ಕಾಲೆಳೆಯುತ್ತಿದ್ದಾರೆ.

ಹೀಗಾಗಿ ಮುನಿರತ್ನರನ್ನು ಪಕ್ಷದಿಂದಲೇ ಉಚ್ಛಾಟಿಸಲು ತಯಾರಿ ನಡೆದಿದೆ ಎನ್ನಲಾಗಿದೆ. ಮುನಿರತ್ನರನ್ನು ಪಕ್ಷದಿಂದ ಉಚ್ಛಾಟಿಸುವ ಮೂಲಕ ಪಕ್ಷಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಆರ್ ಅಶೋಕ್ ಕೂಡಾ ಮುನಿರತ್ನಗೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿ ಮುನಿರತ್ನ ಖೇಲ್ ಶೀಘ್ರದಲ್ಲೇ ಖತಂ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ