ಸಣ್ಣತನದ ರಾಜಕೀಯ ಬಿಟ್ಟು ಜೀವನ ಮಾಡಿ ಎಂದು ಡಿಕೆ ಸುರೇಶ್ ವಿರುದ್ಧ ಗುಡುಗಿದ ಮುನಿರತ್ನ

Webdunia
ಬುಧವಾರ, 7 ಡಿಸೆಂಬರ್ 2022 (18:07 IST)
ಮತದಾರರ ಮಾಹಿತಿ ಗೋಲ್ ಮಾಲ್ ಗೆ ಸಂಬಂಧಿಸಿದಂತೆ ಸಚಿವ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದಾರೆ.ಎಲ್ಲಿ ಮತದಾರರ ಪಟ್ಟಿ ಡಿಲೀಟ್ ಆಗಿದೆ ಅಂತಾ ಆರೋಪ‌ ಮಾಡ್ತಾರೆ.ಡಿ.ಕೆ. ಸುರೇಶ್  ಸರಿಯಾದ ಮಾಹಿತಿ ತನ್ನಿ.ನಿಮ್ಮ ಜೊತೆ ನಾನು ಇದ್ದಾಗ ಯಾವುದೂ ಸೇರ್ಪಡೆ,ಡಿಲೀಟ್ ಆಗಿರಲಿಲ್ಲ.ನಿಮ್ಮ ಜೊತೆ ಇದ್ದಾಗ ನಾನು ಬಹಳ ಪವಿತ್ರವಾಗಿದ್ದೆ, ಈಗ ಪವಿತ್ರ ಇಲ್ಲದಾಗಿದೆ.ಸಂಸದ ಸ್ಥಾನಕ್ಕೆ ಘನತೆ ತರುವಂತಹ ಮಾತಾಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಅಲ್ಲದೇ ಮುನಿರತ್ನ ಅಂತಹ ಕೀಳು ರಾಜಕಾರಣ ಮಾಡಲ್ಲ.ಅವರಿಗೆ ಅಂತಹ ರಾಜಕಾರಣ ಬೇಕೇನೋ.ಮೊದಲು ಡಿ.ಕೆ. ಸುರೇಶ ಕ್ಷೇತ್ರಕ್ಕೆ ಕೊಟ್ಟಿರುವ ಕೆಲಸದ ಮಾಹಿತಿ ಕೊಡಲಿ.ಮತದಾರರ ಪಟ್ಟಿ ಡಿಲೀಟ್ ಮಾಡುವಷ್ಟು ಕೀಳು ಮಟ್ಟ ನನ್ನದಲ್ಲ.ತೇಜೋವಧೆ ಮಾಡಿ ಗೆಲ್ತೀನಿ ಅನ್ನೋದನ್ನು ಬಿಟ್ಟುಬಿಡಿ.ಬನ್ನಿ ಜನರ ಮುಂದೆ ಹೋಗೋಣ.ಸೇರ್ಪಡೆ,ಡಿಲೀಟ್ ನಿಮಗೆ  ರೂಡಿಯಾಗಿದೆ ಆ ಕೆಲಸ ನನ್ನದಲ್ಲ.ನಿಮಗೆ ಅಂತಹ ಅಭ್ಯಾಸಗಳಿವೆ.ಎಂಪಿ ಅಂತಾ ಬಾಯಿಗೆ ಬಂದಂತೆ ಮಾತಾಡೋದಲ್ಲ.ಸಣ್ಣತನದ ರಾಜಕೀಯ ಬಿಟ್ಟು ಜೀವನ ಮಾಡಿ.ಮಲ್ಲೇಶ್ವರಂನಲ್ಲಿ ನನ್ನದು ಐದನೇ ತಲೆಮಾರು,ಸ್ವಲ್ಪ ಗೊತ್ತಿರಲಿ.ನಿಮಗೆ ಗೊತ್ತಿರದಿದ್ದರೆ ನಿಮ್ಮ ಅಣ್ಣನ ಕೇಳಿ.ನಿಮಗಿಂತ ಮೊದಲೇ ಅವರು ಬೆಂಗಳೂರಿಗೆ ಬಂದಿದ್ದು.ನಾನು ಮಲ್ಲೇಶ್ವರದಲ್ಲೇ ಹುಟ್ಟಿದ್ದು.ಚುನಾವಣೆಗೆ ನಾಮಪತ್ರ ಸಲ್ಲಿಸಿ ನಾನು ಕ್ಷೇತ್ರದಲ್ಲಿ ಓಡಾಡಲ್ಲ,ಮತಯಾಚನೆ ಮಾಡಲ್ಲ, ನೀವು ಅದೇ ರೀತಿ ಮಾಡಿ ಜನರ ತೀರ್ಮಾನಕ್ಕೆ ಬಿಡೋಣ ಎಂದು ಮುನಿರತ್ನ ಡಿಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments