Publish Date: Fri, 02 Jul 2021 (17:42 IST)
Updated Date: Fri, 02 Jul 2021 (17:45 IST)
ಬೆಂಗಳೂರಿನ ಪ್ರಸಿದ್ಧ ಬನ ಬನಶಂಕರಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬನನ್ನು ಭೀಕರವಅಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಮದನ್ ಎಂಬ ಹತ್ಯೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದನ್ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಜಯನಗರ ಮತ್ತು ಬನಶಂಕರಿ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
geethanjali
Publish Date: Fri, 02 Jul 2021 (17:42 IST)
Updated Date: Fri, 02 Jul 2021 (17:45 IST)