Select Your Language

Notifications

webdunia
webdunia
webdunia
webdunia

ದುಷ್ಕರ್ಮಿಗಳು ಗಂಭೀರ ಹಲ್ಲೆ ನಡೆಸಿದರೂ ಕ್ರಮ ಕೈಗೊಳ್ಳದ ಇನ್ಸ್ ಪೆಕ್ಟರ್

ದುಷ್ಕರ್ಮಿಗಳು ಗಂಭೀರ ಹಲ್ಲೆ ನಡೆಸಿದರೂ ಕ್ರಮ ಕೈಗೊಳ್ಳದ ಇನ್ಸ್ ಪೆಕ್ಟರ್
bangalore , ಬುಧವಾರ, 7 ಜುಲೈ 2021 (14:43 IST)
ಬೆಂಗಳೂರು: ತಮ್ಮ ಮೇಲೆ ದುಷ್ಕರ್ಮಿಗಳು ಗಂಭೀರ ಹಲ್ಲೆ ನಡೆಸಿದರೂ, ಯಾವುದೇ ಕ್ರಮ ಕೈಗೊಳ್ಳದೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯರಿಬ್ಬರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಗೆ ಬುಧವಾರ ದೂರು ಸಲ್ಲಿಕೆ ಮಾಡಿದ್ದಾರೆ.
 
ನಗರದ ಕಮ್ಮನಹಳ್ಳಿಯ ಎರಡನೇ ಬ್ಲಾಕ್ ನಿವಾಸಿ ವಾಣಿ ಹಾಗೂ ವಲರಾಮತಿ ಎಂಬುವರು ದೂರು ಸಲ್ಲಿಕೆ ಮಾಡಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳ ಪರವಾಗಿ ನಿಂತಿರುವ ನಗರದ ಹೆಣ್ಣೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳವಂತೆ  ಮನವಿ ಮಾಡಿದ್ದಾರೆ.
 
ಕಳೆದ ಏಪ್ರಿಲ್ 26 ರಂದು ಸ್ಥಳೀಯ ಬಿಜೆಪಿ ನಾಯಕ ಕೃಷ್ಣ ಆನಂದ್, ಸರಿತಾ ಬಾಯಿ, ಪುಪ್ಪಾ, ಮಹೇಂದ್ರ, ಲತಾ ಎಂಬುವರು ಸೇರಿದಂತೆ ನಲ್ವತ್ತು ಮಂದಿ ನಿವೇಶನ ಕುರಿತು ವಿಚಾರವಾಗಿ ಉದ್ದೇಶಪೂರಕವಾಗಿ ಮನೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹಲವು ಚಿನ್ನಾಭರಣ, ನಗದು ಹಾಗೂ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು.ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಕ್ರಮವೂ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
 
ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ಹೆಣ್ಣೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಜತೆಗೂಡಿ ಇದುವರೆಗೂ ಎಫ್‌ಐಆರ್ ಸಹ ದಾಖಲು ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ, ನ್ಯಾಯಾಲಯದ ಆದೇಶದ ತೆಗೆದುಕೊಂಡು ಬನ್ನಿ ಎಂದು ಗದರಿಸಿ ಕಳುಹಿಸಿದರು ಎಂದು ವಾಣಿ ಹೇಳಿದ್ದಾರೆ.
 
ಸಣ್ಣ ಖಾಲಿ ನಿವೇಶನಯೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಆದರೆ, ಕೆಲ ರಿಯಲ್ ಎಸ್ಟೇಟ್ ಏಜೆಂಟ್‌ಗಳೊಂದಿಗೆ ಪೊಲೀಸರೇ ಶಾಮೀಲಾಗಿ, ಕಾನೂನು ವ್ಯವಸ್ಥೆಯನ್ನೇ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಕ್ರಮ ಕೈಗೊಂಡು, ತಮಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೌಡಿಗಳ ಕೃತ್ಯಕ್ಕೆ ಕಡಿವಾಣ ಹಾಕಲು ಪಂತ್ ಖಡಕ್​​​ ಸೂಚನೆ: ಲಾಕ್​​ಡೌನ್ ಟೈಮ್​​ನಲ್ಲಾದ ಮರ್ಡರ್ ಡೀಟೈಲ್ಸ್ ಇಲ್ಲಿದೆ!