Publish Date: Tue, 11 Jun 2024 (14:00 IST)
Updated Date: Tue, 11 Jun 2024 (14:05 IST)
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡುವಾಗ ಆರೋಪಿಗಳು ನಟ ದರ್ಶನ್ ಹೆಸರು ಹೇಳಿದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ರಸ್ತೆ ಬದಿ ಬಿದ್ದಿದ್ದ ಮೃತದೇಹದ ಕೊಲೆ ಸಂಬಂಧಿತ ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ ಎಂದು ಹೇಳಿದ್ದಾರೆ.
ದರ್ಶಬ್ ಅವರು ನೇರವಾಗಿ ಭಾಗಿಯಾಗಿದ್ದಾರಾ? ಇಲ್ವಾ.? ಯಾವ ಕಾರಣಕ್ಕೂ ಮರ್ಡರ್ ಆಗಿದೆ? ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.
ಈ ವೇಳೆ ಬೇರೆ ಏನು ಹೇಳಲು ಸಾಧ್ಯವಿಲ್ಲ. ತನಿಖೆ ಆದಮೇಲೆ ಎಲ್ಲವೂ ಗೊತ್ತಾಗುತ್ತದೆ. ಅದಕ್ಕೂ ಮೊದಲು ಏನು ಹೇಳಲು ಸಾಧ್ಯವಿಲ್ಲ. ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದು, ನಂತರ ಬೆಂಗಳೂರು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈಗ ನಮ್ಮ ಇಲಾಖೆಯ ಸುಪರ್ದಿಯಲ್ಲಿ ಇಟ್ಕೊಂಡಿದ್ದಾರೆ, ತನಿಖೆ ಮಾಡುತ್ತಿದ್ದಾರೆ ಎಂದರು.