ಕೊಲೆ ಆರೋಪಿಗಳು ದರ್ಶನ್ ಹೆಸರು ಹೇಳಿದ್ದಕ್ಕೆ ಬಂಧನ: ಪರಮೇಶ್ವರ

Sampriya
ಮಂಗಳವಾರ, 11 ಜೂನ್ 2024 (14:00 IST)
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡುವಾಗ ಆರೋಪಿಗಳು ನಟ ದರ್ಶನ್‌ ಹೆಸರು ಹೇಳಿದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ರಸ್ತೆ ಬದಿ ಬಿದ್ದಿದ್ದ ಮೃತದೇಹದ ಕೊಲೆ ಸಂಬಂಧಿತ ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ ಎಂದು ಹೇಳಿದ್ದಾರೆ.

ದರ್ಶಬ್‌ ಅವರು ನೇರವಾಗಿ ಭಾಗಿಯಾಗಿದ್ದಾರಾ? ಇಲ್ವಾ.? ಯಾವ ಕಾರಣಕ್ಕೂ ಮರ್ಡರ್ ಆಗಿದೆ? ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಬೇರೆ ಏನು ಹೇಳಲು ಸಾಧ್ಯವಿಲ್ಲ. ತನಿಖೆ ಆದಮೇಲೆ ಎಲ್ಲವೂ ಗೊತ್ತಾಗುತ್ತದೆ. ಅದಕ್ಕೂ ಮೊದಲು ಏನು ಹೇಳಲು ಸಾಧ್ಯವಿಲ್ಲ. ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದು, ನಂತರ  ಬೆಂಗಳೂರು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈಗ ನಮ್ಮ ಇಲಾಖೆಯ ಸುಪರ್ದಿಯಲ್ಲಿ ಇಟ್ಕೊಂಡಿದ್ದಾರೆ, ತನಿಖೆ ಮಾಡುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments