ಹಿಂದೂ ವ್ಯಕ್ತಿ ಕೊಲೆ ಅತ್ಯಂತ ಹೇಯವಾದದ್ದು : ಮುತಾಲಿಕ್

Webdunia
ಬುಧವಾರ, 29 ಜೂನ್ 2022 (14:25 IST)
ಧಾರವಾಡ : ರಾಜಸ್ಥಾನದ ಹಿಂದೂ ವ್ಯಕ್ತಿ ಕೊಲೆ ಅತ್ಯಂತ ಹೇಯವಾದ ನೀಚ, ರಾಕ್ಷಸ ಕೃತ್ಯವಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಕಿಡಿಗೇಡಿ ಮುಸ್ಲಿಮರ ಅತಿಯಾದ ಪ್ರವೃತ್ತಿ ನಿರ್ಮಾಣ ಆಗುತ್ತಿದೆ. ಐಸಿಸಿಯಲ್ಲಿ ತಾಲಿಬಾನಿ ಈ ರೀತಿ ಗುಂಡು ಹೊಡೆಯುವುದು ಮಾಡುತ್ತಿದ್ದರು.

ಅದೇ ಮಾದರಿಯಲ್ಲಿ ನಮ್ಮ ದೇಶದಲ್ಲಿ ಪ್ರಾರಂಭವಾಗಿದ್ದು, ಈ ಘಟನೆ ಅತ್ಯಂತ ಗಂಭೀರ ವಿಚಾರವಾಗಿದೆ ಎಂದರು. ಇದನ್ನು ಹಿಂದೂ ಸಮಾಜ, ಸರ್ಕಾರ, ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಬೇಕು.

ಅಲ್ಲದೇ ಇದನ್ನು ಹದ್ದುಬಸ್ತಿನಲ್ಲಿ ಇಟ್ಟು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ, ಇದೇ ಮಾನಸಿಕತೆ ಮುಂದುವರೆಯಲಿದೆ ಎಂದ ಅವರು, ಮೋದಿ ಅವರ ಮೇಲೂ ಇದೇ ಮಾದರಿಯಲ್ಲಿ ಕೊಲೆ ಮಾಡ್ತೆವೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಲಿ ಎಂದು ಹೇಳಿದರು. 

ಕೊಲೆ ಮಾಡಿದವರ ಮೇಲೆ ಐಪಿಸಿ ಸೆಕ್ಷನ್ ಹಾಕದೇ ಭಯೋತ್ಪಾದಕ ಸೆಕ್ಷನ್ ಹಾಕಬೇಕು. ಕೊಲೆಗಡುಕರು ಹೊರಗೆ ಬರಬಾರದು, ಅಷ್ಟೇ ಅಲ್ಲ, ಒಂದೇ ತಿಂಗಳಲ್ಲಿ ವಾದ ವಿವಾದ ಮಾಡಿ ಗಲ್ಲು ಶಿಕ್ಷೆ ಕೊಡಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments